31. ಅವರು ಅಲ್ಲಾಹನ ಹೊರತಾಗಿ, ತಮ್ಮ ವಿದ್ವಾಂಸರನ್ನು, ಸನ್ಯಾಸಿಗಳನ್ನು ಮತ್ತು ಮರ್ಯಮರ ಪುತ್ರ
ಮಸೀಹರನ್ನು ದೇವರಾಗಿಸಿಕೊಂಡಿದ್ದಾರೆ. ನಿಜವಾಗಿ ಅವರಿಗೆ, ಒಬ್ಬ ದೇವರ ಹೊರತು ಬೇರೆ ಯಾರನ್ನೂ
ಪೂಜಿಸಬಾರದೆಂದು ಆದೇಶಿಸಲಾಗಿದೆ. ಅವನ ಹೊರತು ಬೇರೆ ಯಾರೂ ಪೂಜಾರ್ಹರಲ್ಲ. ಅವರು ಪಾಲುಗೊಳಿಸುವ
ಎಲ್ಲದರಿಂದ ಅವನು ಸಂಪೂರ್ಣ ಮುಕ್ತನು.
34. ವಿಶ್ವಾಸಿಗಳೇ, ಖಂಡಿತವಾಗಿಯೂ ಧರ್ಮಗುರುಗಳು ಮತ್ತು ಸನ್ಯಾಸಿಗಳಲ್ಲಿ ಹೆಚ್ಚಿನವರು ಜನರ
ಸಂಪತ್ತನ್ನು ಅಕ್ರಮ ವಿಧಾನಗಳಿಂದ ಕಬಳಿಸುತ್ತಾರೆ ಮತ್ತು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೆ.
(ಅವರಿಗೂ) ಚಿನ್ನ ಹಾಗೂ ಬೆಳ್ಳಿಯನ್ನು ಅಲ್ಲಾಹನ ಮಾರ್ಗದಲ್ಲಿ ಖರ್ಚುಮಾಡದೆ ಅವುಗಳನ್ನು
ಸಂಗ್ರಹಿಸಿಟ್ಟುಕೊಳ್ಳುವವರಿಗೂ ಕಠಿಣ ಶಿಕ್ಷೆಯ ಶುಭವಾರ್ತೆ ನೀಡಿರಿ.
[ಕುರಾನ್, 9: 31, 34]
No comments:
Post a Comment