ಪೂರ್ವ ಮತ್ತು ಪಶ್ಚಿಮವು ಅಲ್ಲಾಹನಿಗೇ ಸೇರಿದೆ. ನೀವು
ಯಾವೆಡೆಗೆ ತಿರುಗಿದರೂ, ಅಲ್ಲಾಹನ ಸಾನ್ನಿಧ್ಯವು ಅಲ್ಲಿದೆ.
ಅಲ್ಲಾಹನು ಖಂಡಿತ ಸರ್ವವ್ಯಾಪಿಯಾಗಿದ್ದಾನೆ ಮತ್ತು ಬಲ್ಲವನಾಗಿದ್ದಾನೆ. ಮತ್ತು ಅವರು ‘‘ಅಲ್ಲಾಹನು ಒಬ್ಬನನ್ನು ತನ್ನ ಪುತ್ರನಾಗಿಸಿಕೊಂಡಿದ್ದಾನೆ’’ ಎನ್ನುತ್ತಾರೆ.
ಅವನು ಪಾವನನು. ನಿಜವಾಗಿ ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅವನಿಗೇ ಸೇರಿದೆ.
ಎಲ್ಲವೂ ಅವನಿಗೆ ವಿಧೇಯವಾಗಿದೆ.
[ಕುರಾನ್, 2: 115-116]
No comments:
Post a Comment