Thursday, February 6, 2014

ನಿಮ್ಮ ಪ್ರಭುವಿನ ಯಾವ ಯಾವ ಶಕ್ತಿ ಸಾಮರ್ಥ್ಯಗಳನ್ನು ಸುಳ್ಳಾಗಿಸುವಿರಿ?


ಆ ದಿನ ಯಾವ ಮಾನವನೊಡನೆಯೂ ಯಾವ ಜಿನ್ನಿನೊಡನೆಯೂ ಅವನ ಪಾಪಗಳ ಕುರಿತು ಪ್ರಶ್ನಿಸಲಾಗುವುದು. ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ? (ಅಂದು) ಅಪರಾಧಿಗಳು ತಮ್ಮ ಮುಖಗಳಿಂದಲೇ ಗುರುತಿಸಲ್ಪಡುವರು ಮತ್ತು ಅವರನ್ನು (ಎಳೆದೊಯ್ಯಲು) ಅವರ ಹಣೆ ಹಾಗೂ ಕಾಲುಗಳಿಂದಲೇ ಹಿಡಿಯಲಾಗುವುದು. ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ? ಇದುವೇ, ಅಪರಾಧಿಗಳು ಅಲ್ಲಗಳೆಯುತ್ತಿದ್ದ ನರಕ. (ಅಂದು) ಅವರು ಅದರ (ನರಕಾಗ್ನಿಯ) ಹಾಗೂ ಕುದಿಯುವ ನೀರಿನ ನಡುವೆ ಅಲೆದಾಡುತ್ತಿರುವರು. ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ
[ಕುರಾನ್, 55: 39-45]

No comments:

Post a Comment