ಝೈದ್ ಬಿನ್ ಹಾರಿಥ್ [ರ]ರವರ ಪತ್ನಿಯ ಹೆಸರು ಉಮ್ಮು ಐಮನ್ [ರ] ಮತ್ತು ಅವರ ಮಗನ ಹೆಸರು ಉಸಮಾ ಬಿನ್ ಝೈದ್ [ರ].
ನಿನ್ನ ಪತ್ನಿಯನ್ನು ನಿನ್ನ ಬಳಿಯೇ ಇರಿಸು ಮತ್ತು ಅಲ್ಲಾಹುವನ್ನು ಭಯಪಡು ಎಂದು ಅಲ್ಲಾಹು ಅನುಗ್ರಹ ನೀಡಿರುವ ಒಬ್ಬ ವ್ಯಕ್ತಿಯೊಂದಿಗೆ ತಾವು ಹೇಳಿದ ಸಂದರ್ಭ(ವನ್ನು ಸ್ಮರಿಸಿರಿ). ಅಲ್ಲಾಹು ಬಹಿರಂಗಪಡಿಸಲು ಮುಂದಾಗಿರುವ ವಿಷಯವನ್ನು ತಾವು ತಮ್ಮ ಹೃದಯದಲ್ಲಿ ಮರೆಮಾಚಿರುವಿರಿ ಮತ್ತು ತಾವು ಜನರನ್ನು ಭಯಪಟ್ಟಿರಿ. ಆದರೆ ತಾವು ಭಯಪಡಲು ಹೆಚ್ಚು ಅರ್ಹತೆಯುಳ್ಳವನು ಅಲ್ಲಾಹುವಾಗಿರುವನು. ತರುವಾಯ ಝೈದ್ ಆಕೆಯಿಂದ ಅಗತ್ಯವನ್ನು ಪೂರೈಸಿದಾಗ ನಾವು ಆಕೆಯನ್ನು ತಮಗೆ ಪತ್ನಿಯನ್ನಾಗಿ ಮಾಡಿದೆವು. ಇದು ತಮ್ಮ ದತ್ತು ಪುತ್ರರು ಅವರ ಪತ್ನಿಯರಿಂದ ಅಗತ್ಯವನ್ನು ಪೂರೈಸಿದ ಬಳಿಕ ಅವರನ್ನು ವಿವಾಹವಾಗುವ ವಿಷಯದಲ್ಲಿ ಸತ್ಯವಿಶ್ವಾಸಿಗಳಿಗೆ ಯಾವುದೇ ಪ್ರಯಾಸವೂ ಉಂಟಾಗದಿರುವ ಸಲುವಾಗಿದೆ. ಅಲ್ಲಾಹುವಿನ ಆಜ್ಜೆಯು ಜಾರಿಗೊಳ್ಳುವಂತದ್ದೇ ಆಗಿದೆ.
[ಕುರಾನ್, 33: 37]
No comments:
Post a Comment